ಬಾರಿಸು ಕನ್ನಡ ಡಿಂಡಿಮವ (BAARISU KANNADA DINDIMAVA) LYRICS



ರಚನೆ: ಕುವೆಂಪು

ಬಾರಿಸು ಕನ್ನಡ ಡಿಂಡಿಮವ


ಬಾರಿಸು ಕನ್ನಡ ಡಿಂಡಿಮವ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ||
 
ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು||1||
 
ಕ್ಷಯಿಸೆ ಶಿವೇತರ ಕೃತಿ ಕೃತಿಯಲ್ಲಿ
ಮೂಡಲಿ ಮಂಗಲ ಮತಿ ಮತಿಯಲ್ಲಿ
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ .... ಸರ್ವರಲಿ||2||

.............................................................................................................

Also See:


No comments:

Post a Comment

ಬಾ ಸವಿತಾ.... ಬಾ ಸವಿತಾ... ರಚನೆ : ಮಾಸ್ತಿ ವೆಂಕಟೇಶ ಅಯ್ಯಂಗಾರ್ |Lyrics in Kannada Baa Savitha song

ಹಾಡಲು ಕಲಿಯಿರಿ(CLICK HERE TO LEARN THIS SONG)   ಬಾ ಸವಿತಾ .... ಬಾ ಸವಿತಾ ... ಒಳಗಿನ ಕಣ್ಣನು ಮುಚ್ಚಿಸಿ ಒಮ್ಮೆ , ತಿಳಿವಿಗೆ ಬಣ್ಣವ ಹಚ್ಚಿಸ...