Feb 4, 2020

ಕೂಸಿನ ಕಂಡೀರಾ | KUSINA KANDIRA SONG LYRICS IN KANNADA




ಕೂಸಿನ ಕಂಡೀರಾ ಮುಖ್ಯಪ್ರಾಣನ ಕಂಡೀರಾ


ಕೂಸಿನ ಕಂಡೀರಾ ಮುಖ್ಯಪ್ರಾಣನ ಕಂಡೀರಾ
ಬಾಲನ ಕಂಡೀರಾ ಬಲವಂತನ ಕಂಡೀರಾ||

ಅಂಜನೆ ಉದರದಿ ಜನಿಸಿತು ಕೂಸು
ರಾಮನ ಪಾದಕ್ಕೆರಗಿತು ಕೂಸು
ಸೀತೆಗೆ ಉಂಗುರ ಕೊಟ್ಟಿತು ಕೂಸು
ಲಂಕಾಪುರವನು ಸುಟ್ಟಿತು ಕೂಸು||1||

ಬಂಡಿ ಅನ್ನವನು೦ಡಿತು ಕೂಸು
ಬಕನ ಪ್ರಾಣವ ಕೊಂಡಿತು ಕೂಸು
ವಿಷದ ಲಡ್ಡುಗೆಯ ಮೆದ್ದಿತು ಕೂಸು
ಮಡದಿಗೆ ಪುಷ್ಪವ ಕೊಟ್ಟಿತು ಕೂಸು ||2||

ಮಾಯವೆಲ್ಲವ ಗೆದ್ದಿತು ಕೂಸು
ಮಧ್ವ ಮತವನುದ್ಧರಿಸಿತು ಕೂಸು
ಪುರಂದರವಿಠಲನ ದಯದಿಂದ ಕೂಸು
ಸುಮ್ಮನೆ ಉಡುಪಿಲಿ ನಿಂತಿತು ಕೂಸು||3||


No comments:

Post a Comment