ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು |UDAYAVAGALI NAMMA CHELUVA KANNADA NAADU LYRICS

 

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು

(ರಚನೆ: ಹುಯಿಲಗೋಳ ನಾರಾಯಣರಾಯರು)


ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು

ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು


 ರಾಜನ್ಯರಿಪು ಪರಶುರಾಮನಮ್ಮನ ನಾಡು

ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು

ಓಜೆಯಿಂ ಮೆರೆದರಸುಗಳ ಸಾಹಸದ ಸೂಡು

ತೇಜವನು ನಮಗೀವ ವೀರವೃಂದದ ಬೀಡು||1||


 ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು

ಜಕ್ಕಣನ ಶಿಲ್ಪಕಲೆ ಅಚ್ಚರಿಯ ಕರುಗೋಡು

ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು

ಬೊಕ್ಕಸದ ಕಣಜ ವೈ ವಿದ್ವತ್ತೆಗಳ ಕಾಡು||2||


 ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು

ಕಾವೇರಿ ಗೋದೆಯರು ಮೈದೊಳೆವ ನಲುನಾಡು

ಆವಗಂ ಸ್ಫೂರ್ತಿಸುವ ಕಬ್ಬಿಗರ ನಡೆಮಾಡು

ಕಾವ ಗದುಗಿನ ವೀರ ನಾರಾಯಣನ ಬೀಡು||3||

.............................................................................................


No comments:

Post a Comment

ನಿನ್ನೆಡೆಗೆ ಬರುವಾಗ ಸಿಂಗರದ ಹೊರೆಯೇಕೆ? ninnedege baruvaaga | Kuvempu | Kannada bhavagethe lyrics

ಹಾಡಲು ಕಲಿಯಿರಿ(CLICK HERE TO LEARN THIS SONG)   ನಿನ್ನೆಡೆಗೆ ಬರುವಾಗ ಸಿಂಗರದ ಹೊರೆಯೇಕೆ ?  ಸಡಗರದ ಮಾತುಗಳ ಬಿಂಕವೇಕೆ ? ನಿನ್ನ ಮುಂದಿರುವಾಗ ಮಂತ್ರಗಳ...