ನೀನಿಲ್ಲದೇ ನನಗೇನಿದೇ(ಭಾವಗೀತೆ) |NEENILLADE NANAGENIDE(EMOTIONAL SONG) LYRICS IN KANNADA

 

ಹಾಡಲು ಕಲಿಯಿರಿ(CLICK HERE TO LEARN THIS SONG)

ನೀನಿಲ್ಲದೇ ನನಗೇನಿದೇ
ಮನಸ್ಸೆಲ್ಲಾ ನಿನ್ನಲ್ಲಿ ನೆಲೆಯಾಗಿದೆ
ಕನಸ್ಸೆಲ್ಲಾ ಕಣ್ಣಲ್ಲೇ ಸೆರೆಯಾಗಿದೇ

ನಿನಗಾಗಿ ಕಾದು ಕಾದು ಪರಿತಪಿಸಿ ನೊಂದೇ ನಾನು
ಕಹಿಯಾದ ವಿರಹದ ನೋವೂ ಹಗಲಿರುಳು ತಂದೇ ನೀನು
ಎದೆಯಾಸೆ ಏನೋ ಎಂದೂ ನೀ ಕಾಣದಾದೇ
ನಿಶೆಯೊಂದೆ ನನ್ನಲ್ಲೀ ನೀ ತುಂಬಿದೇ
ಬೆಳಕೊಂದೆ ನಿನ್ನಿಂದಾ ನಾ ಬಯಸಿದೇ||1||

ಒಲವೆಂಬ ಕಿರಣಾ ಬೀರೀ ಒಳಗಿರುವ ಬಣ್ಣಾ ತೆರೆಸೀ
ಒಣಗಿರುವ ಎದೆಬಿಲದಲ್ಲಿ ಭರವಸೆಯ ಜೀವ ಹರಿಸಿ
ಸೆರೆಯಿಂದ ಬಿಡಿಸಿ ನನ್ನ ಆತಂಕ ನೀಗು
ಹೊಸ ಜೀವ ನಿನ್ನಿಂದಾ ನಾ ತಾಳುವೇ
ಹೊಸ ಲೋಕ ನಿನ್ನಿಂದಾ ನಾ ಕಾಣುವೇ||2||

..................................

Also See:


No comments:

Post a Comment

INSECTS NAMES IN SANSKRIT | कीटा:/ ಕೀಟಗಳು | Sanskrit Learning Through Kannada | list of insects

CLICK HERE TO VIEW ON YOUTUBE   पतङ्ग: = ಚಿಟ್ಟೆ ( ಹಾರಾಡುವ ಕೀಟ ) (fly) चित्रपतङ्ग: = ಚಿಟ್ಟೆ(ಬಣ್ಣ ಬಣ್ಣದ ) (butter fly) पुत्तिका / ...