ತೆರೆದಿದೆ ಮನೆ ಓ ಬಾ ಅತಿಥಿ
ಹೊಸ ಬೆಳಕಿನ ಹೊಸ ಗಾಳಿಯಾ
ಹೊಸ ಬಾಳನು ತಾ ಅತಿಥಿ||
ಆವ ರೂಪದೊಳು ಬಂದರು ಸರಿಯೇ
ಆವ ವೇಷದೊಳು ನಿಂದರು ಸರಿಯೇ
ನೇಸರುದಯದೊಳು ಬಹೆಯಾ ಬಾ
ತಿಂಗಳಂದದಲಿ ಬಹೆಯಾ ಬಾ||1||
ಇಂತಾದರು ಬಾ ಅಂತಾದರು ಬಾ
ಎಂತಾದರು ಬಾ ಬಾ
ಬೇಸರವಿದಕೂ ಸರಿಸುವ ಹೊಸ ಬಾಳ
ಉಸಿರಾಗಿ ಬಾ ಬಾ ಬಾ ||2||
ಕಡಲಾಗಿ ಬಾ ಬಾನಾಗಿ ಬಾ
ಗಿರಿಯಾಗಿ ಬಾ ಕಾನಾಗಿ ಬಾ
ಕಡಲಾಗಿ ಬಾನಾಗಿ ಗಿರಿಯಾಗಿ ಕಾನಾಗಿ
ತೆರೆದಿದೆ ಮನ ಓ ಬಾ
ಹೊಸ ತಾನದ ಹೊಸ ಗಾನದ
ಹೊಸ ತಾನದ ಹೊಸ ಗಾನದ
ರಸ ಜೀವವ ತಾ ತಾ ತಾ||3||
ಹಾಡಲು ಕಲಿಯಿರಿ(CLICK HERE TO LEARN THIS SONG)
......................................................
ALSO SEE:
KANNADA FILM SONGS(ಕನ್ನಡ ಚಿತ್ರಗೀತೆಗಳು).
No comments:
Post a Comment