Jan 2, 2022

ಎಲ್ಲಾರೂ ಮಾಡುವುದು ಹೊಟ್ಟೆಗಾಗಿ (ಸಾಹಿತ್ಯ) |Ellaru maaduvudu hottegaagi song lyrics in Kannada |ಕನಕದಾಸರು

   ಹಾಡಲು ಕಲಿಯಿರಿ(CLICK HERE TO LEARN THIS SONG)

ಎಲ್ಲಾರೂ ಮಾಡುವುದು ಹೊಟ್ಟೆಗಾಗಿ 

ಗೇಣು ಬಟ್ಟೆಗಾಗಿ ತುತ್ತು ಹಿಟ್ಟಿಗಾಗಿ ||

 

ವೇದಶಾಸ್ತ್ರ ಪಂಚಾಂಗ ಓದಿಕೊಂಡು ಪರರಿಗೆ

ಬೋಧನೆಯ  ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ

ವೇದಶಾಸ್ತ್ರ ಪಂಚಾಂಗ ಓದಿಕೊಂಡು ಪರರಿಗೆ

ಬೋಧನೆಯ  ಮಾಡುವುದು ಹೊಟ್ಟೆಗಾಗಿ

ಗೇಣು ಬಟ್ಟೆಗಾಗಿ ತುತ್ತು ಹಿಟ್ಟಿಗಾಗಿ||1||

 

ಚಂಡ ಭಟರಾಗಿ ನಡೆದು ಕತ್ತಿ ಡಾಲು ಕೈಯಲ್ಲಿ ಹಿಡಿದು

ಖಂಡ ತುಂಡ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ

ಚಂಡ ಭಟರಾಗಿ ನಡೆದು ಕತ್ತಿ ಡಾಲು ಕೈಯಲ್ಲಿ ಹಿಡಿದು

ಖಂಡ ತುಂಡ ಮಾಡುವುದು ಹೊಟ್ಟೆಗಾಗಿ

 ಗೇಣು ಬಟ್ಟೆಗಾಗಿ ತುತ್ತು ಹಿಟ್ಟಿಗಾಗಿ||2||

 

ಕುಂಟೆ ತುದಿಗೆ  ಕೊರಡು ಹಾಕಿ ಹೆಂಟೆ ಮಣ್ಣು ಸಮ ಮಾಡಿ

ರೆಂಟೆ ಹೊಡೆದು ಬೆಳೆಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ

ಕುಂಟೆ ತುದಿಗೆ  ಕೊರಡು ಹಾಕಿ ಹೆಂಟೆ ಮಣ್ಣು ಸಮ ಮಾಡಿ

ರೆಂಟೆ ಹೊಡೆದು ಬೆಳೆಸುವುದು ಹೊಟ್ಟೆಗಾಗಿ

 ಗೇಣು ಬಟ್ಟೆಗಾಗಿ ತುತ್ತು ಹಿಟ್ಟಿಗಾಗಿ||3||

 

ಬೆಲ್ಲದಂತೆ ಮಾತನಾಡಿ ಎಲ್ಲರನ್ನು ಮರುಳು ಮಾಡಿ

ಸುಳ್ಳು ಬೊಗಳಿ ತಿಂಬುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ

ಬೆಲ್ಲದಂತೆ ಮಾತನಾಡಿ ಎಲ್ಲರನ್ನು ಮರುಳು ಮಾಡಿ

ಸುಳ್ಳು ಬೊಗಳಿ ತಿಂಬುವುದು ಹೊಟ್ಟೆಗಾಗಿ

 ಗೇಣು ಬಟ್ಟೆಗಾಗಿ ತುತ್ತು ಹಿಟ್ಟಿಗಾಗಿ||4||

 

ಕೊಟ್ಟಣವ ಕುಟ್ಟಿಕೊಂಡು ಕಟ್ಟಿಗೆಯ ಹೊತ್ತುಕೊಂಡು

ಕಷ್ಟ ಮಾಡಿ ತಿಂಬುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ

ಕೊಟ್ಟಣವ ಕುಟ್ಟಿಕೊಂಡು ಕಟ್ಟಿಗೆಯ ಹೊತ್ತುಕೊಂಡು

ಕಷ್ಟ ಮಾಡಿ ತಿಂಬುವುದು ಹೊಟ್ಟೆಗಾಗಿ

ಗೇಣು ಬಟ್ಟೆಗಾಗಿ ತುತ್ತು ಹಿಟ್ಟಿಗಾಗಿ||5||

 

ಹಳ್ಳದಲ್ಲಿ ಕುಳಿತುಕೊಂಡು ಕಲ್ಲು ದೊಣ್ಣೆ ಹಿಡಿದುಕೊಂಡು

 ಕಳ್ಳತನವ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ

ಹಳ್ಳದಲ್ಲಿ ಕುಳಿತುಕೊಂಡು ಕಲ್ಲು ದೊಣ್ಣೆ ಹಿಡಿದುಕೊಂಡು

 ಕಳ್ಳತನವ ಮಾಡುವುದು ಹೊಟ್ಟೆಗಾಗಿ

 ಗೇಣು ಬಟ್ಟೆಗಾಗಿ ತುತ್ತು ಹಿಟ್ಟಿಗಾಗಿ||6||

 

ಉನ್ನತ ಕಾಗಿನೆಲೆಯಾದಿ ಕೇಶವನ ಧ್ಯಾನ

ಮನ ಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕಾಗಿ

ಉನ್ನತ ಕಾಗಿನೆಲೆಯಾದಿ ಕೇಶವನ ಧ್ಯಾನ

ಮನ ಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕಾಗಿ||7||

.........................................................................................................................

Also See:

Lord Shiva Songs(ಈಶ್ವರನ ಹಾಡು)

ಜ್ಞಾನವಿಲ್ಲದೇ ಮೋಕ್ಷವಿಲ್ಲಾ/JNANAVILLADE MOKSHAVILLA song lyrics in kannada

No comments:

Post a Comment