ರಚನೆ: ಕನಕದಾಸರು
ಹಾಡಲು ಕಲಿಯಿರಿ(CLICK HERE TO LEARN THIS SONG)
ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ
ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ||
ತಾಯಿ ತಂದೆಯ ಬಿಟ್ಟು ತಪವ ಮಾಡಲುಬಹುದು
ದಾಯಾದಿ ಬಂಧುಗಳ ಬಿಡಲು ಬಹುದು
ರಾಯ ತಾ ಮುನಿದರೆ ರಾಜ್ಯವನೆ ಬಿಡಬಹುದು
ಕಾಯಜ ಪಿತ ನಿನ್ನ ಅಡಿಯ ಬಿಡಲಾಗದು||1||
ಒಡಲು ಹಸಿಯಲು ಅನ್ನ ವಿಲ್ಲದೆಯೆ ಇರಬಹುದು
ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು
ಮಡದಿ ಮಕ್ಕಳ ಕಡೆಗೆ ತೊಲಗಿಸಿಯೆ ಬಿಡಬಹುದು
ಕಡಲೊಡೆಯ ನಿನ್ನಡಿಯ ಘಳಿಗೆ ಬಿಡಲಾಗದು||2||
ಪ್ರಾಣವನು ಪರರು ಬೇಡಿದರೆತ್ತಿ ಕೊಡಬಹುದು
ಮಾನದಲಿ ಮನವ ತಗ್ಗಿಸಲು ಬಹುದು
ಪ್ರಾಣನಾಯಕನಾದ ಆದಿ ಕೇಶವ ರಾಯ
ಜಾಣ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು||3||
....................................................................
ಪಿಳ್ಳಂಗೋವಿಯ ಚೆಲ್ವ ಕೃಷ್ಣನ|PILLANGOVIYA CHELWA KRISHNANA SONG LYRICS IN KANNADAಮಾತೆ ಪೂಜಕ ನಾನು ಎನ್ನಯ |ದೇಶಭಕ್ತಿ ಗೀತೆ| (Mathe poojaka naanu ennaya)| Patriotic Song Lyrics in Kannada
No comments:
Post a Comment