Aug 20, 2022

ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು|HUTTIDARE KANNADA NAADAL HUTTABEKU SONG LYRICS IN KANNADA

 ಹಾಡಲು ಕಲಿಯಿರಿ(CLICK HERE TO LEARN THIS SONG)


ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು
ಮೆಟ್ಟಿದರೆ ಕನ್ನಡ ಮಣ್ಣನ್ ಮೆಟ್ಟಬೇಕು
ಬದುಕಿದು ಜಟಕಾ ಬಂಡಿ,
ಇದು ವಿಧಿ ಓಡಿಸುವ ಬಂಡಿ
ಬದುಕಿದು ಜಟಕಾ ಬಂಡಿ
ವಿಧಿ ಅಲೆದಾಡಿಸುವ ಬಂಡಿ||


ಕಾಶಿಲಿ ಸ್ನಾನ ಮಾಡು ಕಾಶ್ಮೀರ ಸುತ್ತಿ ನೋಡು
ಜೋಗದ ಗುಂಡಿಗೊಡೆಯ ನಾನೆಂದು ಕೂಗಿ ಹಾಡು
ಅಜಂತ ಎಲ್ಲೋರವ ಬಾಳಲ್ಲಿ ಒಮ್ಮೆ ನೋಡು
ಬಾದಾಮಿ ಐಹೊಳೆಯ ಚೆಂದಾನ ತೂಕಮಾಡು
ಕಲಿಯೋಕೆ ಕೋಟಿ ಭಾಷೆ ಆಡೋಕ್ಕೆ ಒಂದೇ ಭಾಷೆ 

ಕನ್ನಡಾ..ಕನ್ನಡಾ..ಕಸ್ತೂರಿ ಕನ್ನಡಾ||1||


ಧ್ಯಾನಕ್ಕೆ ಭೂಮಿ ಇದು, ಪ್ರೇಮಕ್ಕೆ ಸ್ವರ್ಗ ಇದು
ಸ್ನೇಹಕ್ಕೆ ಶಾಲೆ ಇದು ,ಜ್ಞಾನಕ್ಕೆ ಪೀಠ ಇದು
ಕಾವ್ಯಕ್ಕೆ ಕಲ್ಪ ಇದು, ಶಿಲ್ಪಕ್ಕೆ ತಲ್ಪ ಇದು
ನಾಟ್ಯಕ್ಕೆ ನಾಡಿ ಇದು, ನಾದಾಂತರಂಗವಿದು
ಕುವೆಂಪು ಬೇಂದ್ರೆಯಿಂದ ಕಾರಂತ ಮಾಸ್ತಿಯಿಂದ
ಧನ್ಯವೀ ಕನ್ನಡ ....ಗೋಕಾಕಿನ ಕನ್ನಡಾ..||2||


ಬಾಳಿನ ಬೆನ್ನು ಹತ್ತಿ ನೂರಾರು ಊರು ಸುತ್ತಿ

ಏನೇನೋ ಕಂಡ ಮೇಲೂ ನಮ್ಮೂರೇ ನಮಗೆ ಮೇಲು

ಕೈಲಾಸಂ ಕಂಡ ನಮಗೆ ಕೈಲಾಸ ಯಾಕೆ ಬೇಕು?
ದಾಸರ ಕಂಡ ನಮಗೆ ವೈಕುಂಠ ಯಾಕೆ ಬೇಕು?
ಮುಂದಿನ ನನ್ನ ಜನ್ಮ ಬರೆದಿಟ್ಟನಂತೆ ಬ್ರಹ್ಮ
ಇಲ್ಲಿಯೇ....ಇಲ್ಲಿಯೇ.... ಎಂದಿಗೂ ನಾನಿಲ್ಲಿಯೇ.....||3||

.........................................................



No comments:

Post a Comment