ಹಾಡಲು ಕಲಿಯಿರಿ(CLICK HERE TO LEARN THIS SONG)
ಬನ್ನಿ ಭಾವಗಳೇ ಬನ್ನಿ ನನ್ನೆದೆಗೆ ಕರೆಯುವೆ ಕೈಬೀಸಿ
ಬತ್ತಿದೆದೆಯಲ್ಲಿ ಬೆಳೆಯಿರಿ ಹಸಿರನು ಪ್ರೀತಿಯ ಮಳೆ ಸುರಿಸಿ॥
ಬನ್ನಿ ಸಂಜೆ ಹೊಂಬಿಸಿಲಿನ ಹೊಳೆಯೊಳು ಮೀಯುವ ಮುಗಿಲಿನಲಿ
ತವರಿನೆದೆಗೆ ತಂಪೆರೆಯುವ ಮೇಘದ ಪ್ರೀತಿಯ
ಧಾರೆಯಲ್ಲಿ॥೧॥
ಲೋಕಕೆ ಹೊದಿಸಿದ ಕರಿತೆರೆ ಸರಿಸುವ ಅರುಣೋದಯದಲ್ಲಿ
ಪಚ್ಚೆಕೊಮ್ಮೆ ಬಿಳಿ ಪತ್ತಲ ನೇಯುವ ಹುಣ್ಣಿಮೆ ಹಸ್ತದಲ್ಲಿ॥೨॥
No comments:
Post a Comment