ನಮ್ಮಮ್ಮ
ಶಾರದೆ ಉಮಾ ಮಹೇಶ್ವರಿ
ನಿಮ್ಮೊಳಗಿಹನಾರಮ್ಮಾ|
ಹೆಮ್ಮೆಯ ಗಣನಾಥನೇ ಕಾಣಮ್ಮಾ||
ಮೋರೆ ಕಪ್ಪಿನ ಭಾವ ಮೊರದಗಲದ ಕಿವಿ ಕೋರೆದಾಡೆಯನಾರಮ್ಮಾ|
ಮೂರುಕಣ್ಣನ ಸುತ ಮುರಿದಿಟ್ಟ ಚಂದ್ರನ ಧೀರ ತಾ ಗಣನಾಥನೇ ||1||
ಉಟ್ಟದಟ್ಟಿಯು ಬಿಗಿದುಟ್ಟ ಚೆಲ್ಲಣದ ದಿಟ್ಟ ತಾ ನಿವನಾರಮ್ಮ
ಪಟ್ಟದ ರಾಣಿ ಪಾರ್ವತಿಯ ಕುಮಾರನು ಹೊಟ್ಟೆಯ ಗಣನಾಥನೇ ||2||
ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲ ಭಾಷಿಗನಿವನಾರಮ್ಮ|
ಲೇಸಾಗಿ ಜನರ ಸಲಹುವ ಕಾಗಿನೆಲೆ
ಆದಿ ಕೇಶವ ದಾಸ ಕಣೇ ||3||
............................................................................................
No comments:
Post a Comment