Nov 17, 2024

ಕರುಣಾಳು ಬಾ, ಬೆಳಕೇ |KARUNAALU BAA BELAKE SONG LYRICS IN KANANDA | KANNADA BHAVAGEETHE

 

ಕರುಣಾಳು ಬಾ, ಬೆಳಕೇ ಮುಸುಕಿದೀ ಮಬ್ಬಿನಲಿ,
ಕೈ ಹಿಡಿದು ನಡೆಸೆನ್ನನು |
ಇರುಳು ಕತ್ತಲೆಯ ಗವಿ  ಮನೆ ದೂರ ಕನಿಕರಿಸಿ
ಕೈ ಹಿಡಿದು ನಡೆಸೆನ್ನನು…….||

ಹೇಳಿ ನನ್ನಡಿಯಿಡಿಸು ಬಲು ದೂರ ನೋಟವನು
ಕೇಳನೊಡನೆಯೇ ಸಾಕು ನನಗೊಂದು ಹೆಜ್ಜೆ|
ಮುನ್ನ ಇಂತಿರದಾದೆ ನಿನ್ನ ಬೇಡದೆ ಹೋದೆ
ಕೈ ಹಿಡಿದು ನಡೆಸೆನ್ನನು ||1||

ಇಷ್ಟು ದಿನ ಸಲಹಿರುವೆ ಮೂರ್ಖನನು ನೀನು
ಮುಂದೆಯೂ ಕೈ ಹಿಡಿದು ನಡೆಸದಿಹೆಯಾ|
ಕಷ್ಟದಡವಿಯ ಕಳೆದು, ಬೆಟ್ಟ ಹೊಳೆಗಳ ಹಾದು
ಇರುಳನ್ನು ನೂಕದಿಹೆಯಾ |
ಬೆಳಗಾಗ ಹೊಳೆಯದೆ ಹಿಂದೊಮ್ಮೆ ನಾನೊಲಿದು
ನಡುವೆ ಕಳಕೊಂಡ ದಿವ್ಯ ಮುಖ ನಗುತ ||2||

...............................................................................................................


No comments:

Post a Comment