ಹಾಡಲು ಕಲಿಯಿರಿ(CLICK HERE TO LEARN THIS SONG)
ಆವು ಈವಿನ ನಾವು ನೀವಿಗೆ ಆನು ತಾನದ ತನನನಾS
ಚಾರು ತಂತ್ರಿಯ ಚರಣ ಚರಣದ ಘನಘನಿತ ಚತು--ರಸ್ವನಾ
ಹತವೊ ಹಿತವೋ ಆ ಅನಾಹತಾ ಮಿತಿಮಿತಿಗೆ ಇತಿ ನನನನಾ
ಬೆನ್ನಿನಾನಿಕೆ ಜನನ ಜಾನಿಕೆ ಮನನವೇ ಸಹಿ- ತಸ್ತನಾ.||
ಚಿತ್ತೀಮಳಿ, ತತ್ತೀ ಹಾಕತಿತ್ತು ಸ್ವಾತಿ ಮುತ್ತಿನೊಳಗ
ಸತ್ತಿSಯೊ ಮಗನ ಅಂತ ಕೂಗಿದರು
ಸಾವೀ ಮಗಳು, ಭಾವೀ ಮಗಳು ಕೂಡಿ…..|
ಈ ಜಗ, ಅಪ್ಪಾ, ಅಮ್ಮನ ಮಗ
ಅಮ್ಮನೊಳಗ ಅಪ್ಪನ ಮೊಗ
ಅಪ್ಪನ ಕತ್ತಿಗೆ ಅಮ್ಮನ ನೊಗ
ನಾ ಅವರ ಕಂದ ಶ್ರೀ ಗುರುದತ್ತ ಅಂದ.||
ನಾನು ನೀನು ಆನು ತಾನು ( 4 ಸಲ)
ನಾಕು ನಾಕೆ ತಂತಿ,
ಸೊಲ್ಲಿಸಿದರು ನಿಲ್ಲಿಸಿದರು ಓಂ ಓಂ ದಂತಿ
ಗಣನಾಯಕ ಮೈ ಮಾಯಕ ಸೈ ಸಾಯಕ ಮಾಡಿ
ಗುರಿಯ ತುಂಬಿ ಕುರಿಯ ಕಣ್ಣು
ಧಾತು ಮಾತು (3 ಸಲ)
ಕೂಡಿ. ………||
ನಾಕು ನಾಕೆ ತಂತಿ
No comments:
Post a Comment