ಹಾಡಲು ಕಲಿಯಿರಿ(CLICK HERE TO LEARN THIS SONG)
ರಚನೆ:
ಡಾ॥ ಜಿ.ಎಸ್.ಶಿವರುದ್ರಪ್ಪ
ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ
ಬೆಳಕನಿಟ್ಟು ತೂಗಿದಾಕೆ,
ಬೆಳಕನಿಟ್ಟು ತೂಗಿದಾಕೆ
ನಿನಗೆ ಬೇರೆ ಹೆಸರು ಬೇಕೆ, ಸ್ತ್ರೀ ಎಂದರೆ ಅಷ್ಟೆ ಸಾಕೆ ||
ಹಸಿರ ಉಟ್ಟ ಬೆಟ್ಟಗಳಲಿ ಮೊಲೆ ಹಾಲಿನ ಹೊಳೆಯ ಇಳಿಸಿ
ಬಯಲ ಹಸಿರ ನಗಿಸಿದಾಕೆ,
ಬಯಲ ಹಸಿರ ನಗಿಸಿದಾಕೆ
ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೆ ಸಾಕೆ ||1||
ಮರಗಿಡ ಹೂ ಮುಂಗುರುಳನು ತಂಗಾಳಿಯ ಬೆರಳೂ ಸವರಿ
ಹಕ್ಕಿ ಗಿಲಕಿ ಹಿಡಿಸಿದಾಕೆ , ಹಕ್ಕಿ ಗಿಲಕಿ ಹಿಡಿಸಿದಾಕೆ
ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೆ ಸಾಕೆ
||2||
ಮನೆಮನೆಯಲಿ ದೀಪ ಮುಡಿಸಿ ಹೊತ್ತು ಹೊತ್ತಿಗೆ ಅನ್ನ ಉಣಿಸಿ
ತಂದೆ ಮಗುವ ತಬ್ಬಿದಾಕೆ, ತಂದೆ ಮಗುವ ತಬ್ಬಿದಾಕೆ
ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೆ ಸಾಕೆ
||3||
No comments:
Post a Comment