ಹಾಡಲು ಕಲಿಯಿರಿ(CLICK HERE TO LEARN THIS SONG)
ಎಲೆಗಳು ನೂರಾರು ಭಾವದ ಎಳೆಗಳು ನೂರಾರು
ಎಲೆಗಳ ಬಣ್ಣ ಒಂದೇ ಹಸಿರು |
ಜಾತಿ,
ಭಾಷೆ, ಪಂಥ ಹಲವು
ಅವುಗಳ ಹಿಂದೆ ಮಾತ್ರ ಒಂದೇ ಒಲವು
ಸಾಗೋಣ ಒಟ್ಟಿಗೆ ಸಾಗೋಣ , ನಾವು ನೀವು ಸೇರಿ ಒಂದಾಗಿ
ನೀಗೋಣ ಭಿನ್ನತೆ ನೀಗೋಣ , ಸಾವಿರ ಹೆಜ್ಜೆ ಒಂದೇ ಗುರಿಗಾಗಿ ||
ಕಿಡಿಗಳು ನೂರಾರು ಬೆಳಕಿನ ಕುಡಿಗಳು ನೂರಾರು
ಬೆಳಕಿನ ಪರಿಗೆ ಒಂದೇ ಹೆಸರು |
ಸೂರ್ಯ,
ಚಂದ್ರ, ಲಾಂದ್ರ, ಹಣತೆ,
ಅವುಗಳ ಹಿಂದೆ ಮಾತ್ರ ಒಂದೇ ಘನತೆ
ತೆರೆಯೋಣ ಹೃದಯ ತೆರೆಯೋಣ , ನಾವು ನೀವು ಸೇರಿ ಒಂದಾಗಿ
ಮರೆಯೋಣ ಭೇದ ಮರೆಯೋಣ , ನದಿಗಳು ಕೂಡಿದ ಪ್ರೀತಿಯ ಕಡಲಾಗಿ ||1||
ಪದಗಳು ನೂರಾರು ಬದುಕಿನ ಹದಗಳು ನೂರಾರು
ಪದಗಳ ಹಿಂದೆ ಒಂದೇ ಉಸಿರು |
ಅಕ್ಕರೆಯಿಂದ ಒಟ್ಟಿಗೆ ಬಾಳೋಣ
ಭಾರತ ಮಾತೆಗೆ ನಮ್ಮ ಪ್ರೀತಿಯ ತೋರೋಣ
ಕಟ್ಟೋಣ ನಾಡನು ಕಟ್ಟೋಣ, ನಾವು ನೀವು ಸೇರಿ ಒಂದಾಗಿ
ಮುಟ್ಟೋಣ ಬಾನನು ಮುಟ್ಟೋಣ,
ತಾರೆಗಳೇ ಈ ನಾಡಿನ ಸೂರಾಗಿ ||2||
No comments:
Post a Comment