Aug 3, 2025

ಮಾನವನಾಗಿ ಹುಟ್ಟಿದ ಮೇಲೆ ಏನೇನ್ ಕಂಡಿ SONG LYRICS IN KANNADA | MAANAVANAAGI HUTTIDA MYALE |DR.RAJKUMAR

 ಹಾಡಲು ಕಲಿಯಿರಿ(CLICK HERE TO LEARN THIS SONG)

ಮಾನವನಾಗಿ ಹುಟ್ಟಿದ ಮೇಲೆ ಏನೇನ್ ಕಂಡಿ |

ಸಾಯೋ ತನಕ ಸಂಸಾರದೊಳಗೆ ಗಂಡಾಗುಂಡಿ |

ಹೇರಿಕೊಂಡು ಹೋಗೋದಿಲ್ಲ ಸತ್ತಾಗ್ ಬಂಡಿ

ಇರೋದರೊಳಗೆ ಒಮ್ಮೆ ನೋಡು ಜೋಗದ್ ಗುಂಡಿ   || ||

 

ತಾಳಗುಪ್ಪಿ ತಾರಕವೆಂಬ ಬೊಂಬಾಯ್ ಮಠ |

ಸಾಲಗುಡ್ಡದ ಮ್ಯಾಲೆ ನೋಟಕ ಭಟ್ಕಳ್ ಮಠ |

ದಾರಿ ಕಡಿದು ಮಾಡಿದರೆ ಗುಡ್ಡ ಬೆಟ್ಟ |

ಪಶ್ಚಿಮ ಘಟ್ಟದ ಮ್ಯಾಲೆ ನೋಡು ಮೈಸೂರ್ ಬಾವುಟ   || ||

 

ನಾಡಿನೊಳಗೆ ನಾಡು ಚೆಲುವ ಕನ್ನಡ ನಾಡು |

ಬೆಳ್ಳಿ ಬಂಗಾರ ಬೆಳಿಯುತಾವೆ ಬೆಟ್ಟ ಕಾಡು |

ಭೂಮಿತಾಯಿ ಮುಡಿದು ನಿಂತಾಳ್ ಬಾಸಿಂಗ್ ಜೋಡು |

ಬಾಣಾವತಿ ಬೆಡಗಿನಿಂದ ಬರ್ತಾಳೆ ನೋಡು   || ||

 

ಅಂಕು ಡೊಂಕು ವಂಕಿ ಮುರಿ ರಸ್ತೆದಾರಿ |

ಹತ್ತಿ ಇಳಿದು ಸುತ್ತಿದಂಗೆ ಹಾವಿನ ಮರಿ |

ತೊಟ್ಟಿಲ ಜೀಕಿ ಆಡಿದ್ಹಾಂಗೆ ಮನಸಿನ ಲಹರಿ |

ನಡೆಯುತದೆ ಮೈಸೂರೊಳಗೆ ದರಂದುರಿ   || ||

 

ಹೆಸರು ಮರ್ತಿ ಶರಾವತಿ ಅದೇನ್ ಕಷ್ಟ |

ಕಡೆದ ಕಲ್ಲ ಕಂಬದ ಮ್ಯಾಲೆ ಪೂಲಿನಕಟ್ಟ |

ಎಷ್ಟು ಮಂದಿ ಎದೆಯ ಮುರಿದು ಪಡುತಾರ್ ಕಷ್ಟ |

ಸಣ್ಣದರಿಂದ ದೊಡ್ಡದಾಗಿ ಕಾಣೋದ್ ಬೆಟ್ಟ   || ||

 

ಬುತ್ತಿ ಉಣುತಿದ್ರುಣ್ಣು ಇಲ್ಲಿ ಸೊಂಪಾಗಿದೆ |

ಸೊಂಪು ಇದಪು ಸೇರಿ ಮನಸು ಕಂಪಾಗ್ತದೆ |

ಕಂಪಿನಿಂದ ಜೀವಕ್ಕೊಂದು ತಂಪಾಗ್ತದೆ |

ತಂಪಿನೊಳಗೆ ಮತ್ತೊಂದೇನೋ ಕಾಣಸ್ತದೆ    || ||

 

ಅಡ್ಡ ಬದಿ ಒಡ್ಡು ನಲಿಸಿ ನೀರಿನ ಮಿತಿ |

ಇದರ ಒಳಗೆ ಇನ್ನು ಒಂದು ಹುನ್ನಾರೈತಿ |

ನೀರ ಕೆಡವಿ ರಾಟೆ ತಿರುವಿ ಮಿಂಚಿನ ಶಕ್ತಿ |

ನಾಡಿಗೆಲ್ಲ ಕೊಡ್ತಾರಂತೆ ದೀಪದ ತಂತಿ    || ||

 

ಊಟ ಮುಗಿದಿದ್ರೇಳು ಮುಂದೆ ನೋಡೋದದೆ |

ನೋಡುತ್ತಿದ್ರೆ ಬುದ್ಧಿ ಕೆಟ್ಟು ಹುಚ್ಚಾಗ್ತದೆ |

ಬೇಕಾದ್ರಲ್ಲಿ ಉಡುಪಿ ಮಾವನ ಮನೆಯೊಂದಿದೆ |

ಉಳಿಯೋದಾದ್ರೆ ಮಹರಾಜ್ರ ಬಂಗ್ಲೆ ಅದೆ  || ||

 

ನೋಡು ಗೆಳೆಯ ಜೋಕೆ ಮಾತ್ರ ಪಾತಾಳ ಗುಂಡಿ |

ಹಿಂದಕೆ ಸರಿದು ನಿಲ್ಲು ತುಸು ಕೈತಪ್ಪಿಕೊಂಡಿ |

ಕೈಗಳಳ್ತಿ ಕಾಣಸ್ತದೆ ಬೊಂಬಾಯ್ ದಂಡೀ |

ನಮ್ಮದಂದ್ರೆ ಹೆಮ್ಮೆಯಲ್ಲ ಜೋಗದ ಗುಂಡೀ  || ||

 

ಶಿಸ್ತುಗಾರ ಶಿವಪ್ಪನಾಯ್ಕ ಕೆಳದಿಯ ನಗರ |

ಚಿಕ್ಕದೇವ ದೊಡ್ಡದೇವ ಮೈಸೂರಿನವರ |

ಹಿಂದಕ್ಕಿಲ್ಲಿ ಬಂದಿದ್ರಂತೆ ಶ್ರೀರಾಮರ |

ಎಲ್ಲ ಕಥೆ ಹೇಳುತದೆ ಕಲ್ಪಾಂತರ   || ೧೦ ||

 

ರಾಜ ರಾಕೆಟ್ ರೋರರ್ ಲೇಡಿ ಚತುರ್ಮುಖ |

ಜೋಡಿಗೂಡಿ ಹಾಡಿತಾವೆ ಹಿಂದಿನ ಸುಖ |

ತಾನು ಬಿದ್ರೆ ಆದೀತೆಳು ತಾಯಿಗೆ ಬೆಳಕ |

ಮುಂದಿನವರು ಕಂಡರೆ ಸಾಕು ಸ್ವಂತ ಸುಖ   || ೧೧ ||

 

ಒಂದು ಎರಡು ಮೂರು ನಾಲ್ಕು ಆದಾವ್ ಮತ |

ಹಿಂದಿನಿಂದ ಹರಿದು ಬಂದದ್ದೊಂದೇ ಮತ |

ಗುಂಡಿ ಬಿದ್ದು ಹಾಳಾಗಲಿಕ್ಕೆ ಸಾವಿರ ಮತ |

ಮುಂದೆ ಹೋಗಿ ಸೇರುವಲ್ಲಿಗೊಂದೇ ಮತ    || ೧೨ ||

 

ಷಹಜಹಾನ ತಾಜಮಹಲು ಕೊಹಿನೂರ್ ಮಣಿ |

ಸಾವಿರಿದ್ರು ಸಲ್ಲವಿದಕೆ ಚೆಲುವಿನ ಕಣಿ |

ಜೀವವಂತ ಶರಾವತಿಗಿನ್ನಾವ್ದೆಣಿ |

ಹೊಟ್ಟೆಕಿಚ್ಚಿಗಾಡಿಕೊಂಡ್ರೆ ಅದಕಾರ್ ಹೊಣೆ   || ೧೩ ||

 

ಶರಾವತೀ ಕನ್ನಡ ನಾಡ ಭಾಗೀರಥಿ |

ಪುಣ್ಯವಂತ್ರು ಬರ್ತಾರಿಲ್ಲಿ ದಿನಂಪ್ರತೀ |

ಸಾವು ನೋವು ಸುಳಿಯದಿಲ್ಲಿಯ ಕರಾಮತಿ |

ಮಲ್ಲೇಶನ ನೆನೆಯುತಿದ್ರೆ ಜೀವನ್ಮುಕ್ತಿ   || ೧೪ ||

 ......................................................................................


No comments:

Post a Comment