ಹಾಡಲು ಕಲಿಯಿರಿ(CLICK HERE TO LEARN THIS SONG)
ರಚನೆ: ಕೆ.ಎಸ್. ನರಸಿಂಹಸ್ವಾಮಿ
ಅಕ್ಕಿ ಆರಿಸುವಾಗ ಚಿಕ್ಕ ನುಚ್ಚಿನ ನಡುವೆ
ಬಂಗಾರವಿಲ್ಲದ ಬೆರಳು
ತಗ್ಗಿರುವ ಕೊರಳಿನ ಸುತ್ತ ಕರಿಮಣಿಯೊಂದೇ
ಸಿಂಗಾರ ಕಾಣದಾ ಹೆರಳು
ಬಂಗಾರವಿಲ್ಲದಾ ಬೆರಳು ||
ಹೆರಳಿನ ಭಾರಕ್ಕೆ ತುಂಬಿರುವ ಕೆನ್ನೆಯಲಿ
ಹದಿನಾರು ವರುಷದ ನೆರಳು
ದೀಪದಂತರಳಿದ ಸಿರಿಗಣ್ಣ ಸನ್ನೆಯಲಿ
ಹುಚ್ಚು ಹೊಳೆ ಮುಂಗಾರಿನುರುಳು
ಬಂಗಾರವಿಲ್ಲದ ಬೆರಳು ||1||
ಕಲ್ಲ ಹರಳನು ಹುಡುಕಿ ಎಲ್ಲಿಗೋ ಎಸೆವಾಗ
ಝಲ್ಲೆನ್ನುವಾ ಬಳೆಯ ಸದ್ದು
ಅತ್ತ ಯಾರೋ ಹೋದ ಇತ್ತ ಯಾರೋ ಬಂದ
ಕಡೆಗೆಲ್ಲ ಕಣ್ಣುಬಿದ್ದು
ಬಂಗಾರವಿಲ್ಲದ ಬೆರಳು ||2||
ಮನೆಗೆಲಸ ಬೆಟ್ಟದಷ್ಟಿರಲು ಸುಮ್ಮನೇ ಇವಳು
ಚಿತ್ರದಲಿ ತಂದಂತೆ ಇಹಳು
ಬೇಸರಿಯ ಕಿರಿಮುತ್ತು ನುಚ್ಚಿನಲಿ ನುಚ್ಚಿರಲು
ಹುಡುಕುತಿವೆ ಆ ಹತ್ತು ಬೆರಳು
ಬಂಗಾರವಿಲ್ಲದಾ ಬೆರಳು ||3||
……………………………………………………………………...............
No comments:
Post a Comment