ಅಂತರಂಗದ ಮೃದಂಗ ಅಂತು ತೊಂ ತನಾನ |ANTHARANGA DA MRADANGA SONG LYRICS |DA RA BENDRE SONGS

 

ಅಂತರಂಗದ ಮೃದಂಗ ಅಂತು ತೊಂ ತನಾನ
ಚಿತ್ತ ತಾಳ ಬಾರಿಸುತಲಿತ್ತು ಝಂ ಝಣಣ ನಾನಾ
ನೆನಪು ತಂತಿ ಮೀಟುತಿತ್ತು ತೊಂತನನ ತಾನ, ತೊಂತನನ ತಾನ,
ತೊಂತನನ ತಾನ ತಾನ

ಹಲವು ಜನ್ಮದಿಂದ ಬಂದ ಯಾವುದೋನೋ ಧ್ಯಾನ
ಏಕನಾದದಂದದೊಂದು ತಾನದ ವಿತಾನ
ತನಗೆ ತಾನೇ ಸೋಲುತಿಹುದು ನೂಲುತಿಹುದು ಗಾನ ||

ಕಲ್ಪದಾದಿಯಲ್ಲೆ ನನ್ನ ನಿನ್ನ ವಿರಹವಾಗಿ
ಎಲ್ಲೋ ಏನೋ ನಿನ್ನ ಹುಡುಕಿ ಕಾಂಬ ಕಣ್ಣೆ ಹೋಗಿ
ಮರೆವೆಗೊಂಡು ಬಿದ್ದೆ ನಾನು ನೆಲದ ಮಣ್ಣು ತಾಗಿ ||

ಕತ್ತಲಲ್ಲೆ ಬೆಳಕು ಮಿಂಚಿ ಪಡೆದೀತೇಳು ಬಣ್ಣ
ಮೂಕ ಮೌನ ತೂಕ ಮೀರಿ ದನಿಯು ಹುಟ್ಟಿ ಸಣ್ಣ
ಕಣ್ಣ ಮಣ್ಣ ಕೂಡಲಲ್ಲಿ ಹಾಡು ಕಟ್ಟಿತಣ್ಣ ||
.....................................................................................................


No comments:

Post a Comment

ಬಾ ಸವಿತಾ.... ಬಾ ಸವಿತಾ... ರಚನೆ : ಮಾಸ್ತಿ ವೆಂಕಟೇಶ ಅಯ್ಯಂಗಾರ್ |Lyrics in Kannada Baa Savitha song

ಹಾಡಲು ಕಲಿಯಿರಿ(CLICK HERE TO LEARN THIS SONG)   ಬಾ ಸವಿತಾ .... ಬಾ ಸವಿತಾ ... ಒಳಗಿನ ಕಣ್ಣನು ಮುಚ್ಚಿಸಿ ಒಮ್ಮೆ , ತಿಳಿವಿಗೆ ಬಣ್ಣವ ಹಚ್ಚಿಸ...