ಹಾಡಲು ಕಲಿಯಿರಿ(CLICK HERE TO LEARN THIS SONG)
ಮಳೆಯ ದಯಮಾಡೊ ಶ್ರೀರಂಗಾ ನಿಮ್ಮ |
ಕರುಣ ತಪ್ಪಿದರೆ ಉಳಿಯದೀ ಲೋಕ ||ಪ||
ಪಶುಜಾತಿ ಹುಲ್ಲೆ ಸಾರಂಗ ಮೃಗಗಳು ಬಹಳ |
ಹಸಿದು ಬಾಯಾರಿ ಬತ್ತಿದ ಕೆರೆಗೆ ಬಂದು ||
ತೃಷೆಯಡಗದೆ ತಲ್ಲಣಿಸಿ ಮೂರ್ಛಯೆಗೊಂಡು |
ದೆಸೆದೆಸೆಗೆ ಬಾಯಿ ಬಿಡುತಿಹವಯ್ಯ ಹರಿಯೆ ||1||
ಧಗೆಯಾಗಿ ದ್ರವಗುಂದಿ ಇರುವ ಬಾವಿಯ ನೀರ |
ಮೊಗೆ ಮೊಗೆದು ಪಾತ್ರೆಯಲಿ ನಾರಿಯರು ||
ಹಗಲೆಲ್ಲ ತರುತಿಹರು ಯೋಚನೆಯ ಮಾಡುತ್ತ
ಬೇಗದಿಂದಲಿ ತರಿಸೊ ವೃಷ್ಟಿಯನು ಹರಿಯೆ ||2||
ಸಂದು ಹೋದವು ಜ್ಯೇಷ್ಠ ಆಷಾಢ ಶ್ರಾವಣ |
ಬಂದಿದೆ ಭಾದ್ರಪದ ಮಾಸವೀಗ||
ಇಂದು ಪುರಂದರಗೆ ಹೇಳಿ ವೃಷ್ಟಿಯ ತರಿಸೊ |
ಸಂದೇಹವಿನ್ಯಾಕೆ ಹೆಳವನಕಟ್ಟೆಯ ರಂಗ ||3 ||
--------------------------------------------------------------------------------
No comments:
Post a Comment