Showing posts with label KANAKADASA SONGS(ಕನಕದಾಸರ ಗೀತೆಗಳು). Show all posts
Showing posts with label KANAKADASA SONGS(ಕನಕದಾಸರ ಗೀತೆಗಳು). Show all posts

ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ | NEE MAAYEYOLAGO NINNOLU MAAYEYO | KANAKADASA SONG

ಹಾಡಲು ಕಲಿಯಿರಿ(CLICK HERE TO LEARN THIS SONG) 

ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ

ನೀ ದೇಹದೊಳಗೂ ನಿನ್ನೊಳು ದೇಹವೊ ಹರಿಯೆ |ಪ| 


ಬಯಲೊಳಗೆ ಆಲಯವೂ ಆಲಯದಿ ಬಯಲೊ 

ಬಯಲು ಆಲಯವೆರಡು ನಯನದೊಳಗೂ 

ನಯನ ಬುದ್ಧಿಯವೊಳಗೂ ಬುದ್ಧಿ ನಯನದೊಳಗೂ

ನಯನ ಬುದ್ಧಿಗಳೆರಡೂ ನಿನ್ನೊಳಗೊ ಹರಿಯೆ |1| 


ಸವಿಯು ಸಕ್ಕರೆಯೊಳಗೂ ಸಕ್ಕರೆಯು ಸವಿಯೊಳಗೂ 

ಸವಿಯು ಸಕ್ಕರೆ ಎರಡು ಜೀಹ್ವೆಯೊಳಗೂ 

ಜೀಹ್ವೆ ಮನಸಿನವೊಳಗೋ ಮನಸು ಜೀಹ್ವೆಯವೊಳಗೂ

ಜೀಹ್ವೆ ಮನಸುಗಳೆರಡೂ ನಿನ್ನೊಳಗೊ ಹರಿಯೆ |2| 


ಕುಸುಮದಲಿ  ಗಂಧವೋ ಗಂಧದಲಿ ಕುಸುಮವೊ

ಕುಸುಮ ಗಂಧಗಳೆರಡು ಆಗ್ರಾಣದೊಳಗೂ

ಅಸಮಭವ ಕಾಗಿನೆಲೆ ಆದಿಕೇಶವರಾಯ

ಉಸುರಲೆನ್ನೊಳವಲ್ಲ ಎಲ್ಲ ನಿನ್ನೊಳಗೊ ಹರಿಯೆ

...............................................................................................................

ತಲ್ಲಣಿಸದಿರು ಕಂಡ್ಯ ತಾಳು ಮನವೇ SONG LYRICS | TALLAnISADIRU KANDYA SONG LYRICS |

 ಹಾಡಲು ಕಲಿಯಿರಿ(CLICK HERE TO LEARN THIS SONG)

ರಚನೆ : ಕನಕದಾಸರು

ತಲ್ಲಣಿಸದಿರು ಕಂಡ್ಯ ತಾಳು ಮನವೇ
ಎಲ್ಲರನು ಸಲಹುವನು ಇದಕೆ ಸಂಶಯಬೇಡ ||

ಬೆಟ್ಟದ ತುದಿಯಲ್ಲಿ ಹುಟ್ಟಿರುವ ವೃಕ್ಷಕ್ಕೆ
ಕಟ್ಟೆಯನು ಕಟ್ಟಿ ನೀರೆರೆದವರು ಯಾರು
ಹುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲು
ಗಟ್ಯಾಗಿ ಸಲಹುವನು ಇದಕೆ  ಸಂಶಯಬೇಡ||1||

ಕಲ್ಲೊಳಗೆ  ಹುಟ್ಟಿರುವ ಕ್ರಿಮಿ ಕೀಟಗಳಿಗೆಲ್ಲ
ಅಲ್ಲಲ್ಲಿಗಾಹಾರ ಇತ್ತವರು ಯಾರೋ
ಬಲ್ಲಿದನು ಕಾಗಿನೆಲೆಯಾದಿ ಕೇಶವರಾಯ
ಎಲ್ಲರನು ಸಲಹುವನು ಇದಕೆ ಸಂಶಯಬೇಡ||2||
......................................................................................


ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ SONG LYRICS | ಕನಕದಾಸರು |BAGILANU TEREDU SONG LYRICS IN KANNADA

 ಹಾಡಲು ಕಲಿಯಿರಿ(CLICK HERE TO LEARN THIS SONG)

ರಚನೆ: ಕನಕದಾಸರು

ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ

ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿಸಹಿತ ಕ್ಷೀರವಾರಿಧಿಯೊಳಿರಲು
ಕರಿರಾಜ ಕಷ್ಟದಲಿ ಆದಿಮೂಲಾ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೋ ನರಹರಿಯೇ ||1||

ಕಡು ಕೋಪದಲಿ ಖಳನು ಖಡುಗವನು ಹಿಡಿದು
ನಿನ್ನೊಡೆಯನೆಲ್ಲಿಹನು ಎಂದು ನುಡಿಯೇ
ದೃಢ ಭಕಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆ
ಸಡಗರದಿ ಕಂಭದಿಂದೊಡೆದೆಯೋ ನರಹರಿಯೇ ||2||

ಯಮಸುತನ ರಾಣಿಗೆ ಅಕ್ಷಯವಸನವಿತ್ತೆ
ಸಮಯದಲಿ ಅಜಮಿಳನ ಪೊರೆದೆ
ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಲಾಕ್ಷ ಕಾಗಿನೆಲೆಯಾದಿ ಕೇಶವನೆ ||3||
.........................................................................................................


ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೇ SONG LYRICS |KANAKADASA SONG| ಭಕ್ತ ಕನಕದಾಸ MOVIE SONG

 ಹಾಡಲು ಕಲಿಯಿರಿ(CLICK HERE TO LEARN THIS SONG)

ದೀನ ನಾನು ಸಮಸ್ತ ಲೋಕಕೆ ದಾನಿ ನೀನು
ವಿಚಾರಿಸಲು ಮತಿಹೀನ ನಾನು ಮಹಾಮಹಿಮ ಕೈವಲ್ಯಪತಿ ನೀನು|

ಏನ ಬಲ್ಲೆನು ನಾನು ನೆರೆ ಸುಜ್ನಾನಮೂರುತಿ ನೀನು
ನಿನ್ನ ಸಮಾನರುಂಟೇ ದೇವ.... ರಕ್ಷಿಸು ನಮ್ಮ ಅನವರತ ||
ದೇವ ... ದೇವ.... ದೇವ....

ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೇ
ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೇ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ ಬಾಗಿಲನು ತೆರೆದು..||

ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿ ಸಹಿತ ಕ್ಷೀರವಾರಿಧಿಯೊಳಿರಲೂ...
ಕರಿರಾಜ ಕಷ್ಟದಲಿ ಆದಿಮೂಲ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೋ ನರಹರಿಯೆ ..ಬಾಗಿಲನು ತೆರೆದು ||

ಕಡುಕೋಪದಿಂ ಖಳನು ಖಡ್ಗವನೆ ಪಿಡಿದು..
ನಿನ್ನೊಡೆಯ ಎಲ್ಲಿಹನು ಎಂದು ನುಡಿಯೇ..
ಧೃಢ ಭಕುತಿಯಲು ಶಿಶುವು ಬಿಡದೆ ನಿನ್ನನು ಭಜಿಸೆ..
ಸಡಗರದಿ ಸ್ತಂಭದಿಂದೊಡೆದೆ ನರಹರಿಯೆ ಬಾಗಿಲನು ತೆರೆದು...

ಯಮಸುತನ ರಾಣಿಗೆ ಅಕ್ಷಯವಸನವನಿತ್ತೆ
ಸಮಯದಲಿ ಅಜಮಿಳನ ಪೊರೆದೇ...
ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಲಾಕ್ಷ ಕಾಗಿನೆಲೆಯಾದಿಕೇಶವನೇ ಬಾಗಿಲನು ತೆರೆದು...


ಬಾಗಿಲನು ತೆರೆದು... ಸೇವೆಯನು ಕೊಡೊ ಹರಿಯೇ

ಬಾಗಿಲನು ತೆರೆದು... ಸೇವೆಯನು ಕೊಡೊ ಹರಿಯೇ

ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ ||ಬಾಗಿಲನು ತೆರೆದು..||

..............................................................................................................................................................


ವರವ ಕೊಡು ಎನಗೆ ವಾಗ್ದೇವಿ ನಿನ್ನ |VARAVA KODU ENAGE |KANAKADASA SONGS|LORD SARASWATI SONGS |

 ಹಾಡಲು ಕಲಿಯಿರಿ(CLICK HERE TO LEARN THIS SONG)

ವರವ ಕೊಡು ಎನಗೆ ವಾಗ್ದೇವಿ ನಿನ್ನ
ಚರಣಕಮಲಂಗಳನ ದಯಮಾಡು ದೇವಿ            ||||

ಶಶಿ ಮುಖದ ನಸುನಗೆಯ ಬಾಲೆ
ಎಸೆವ ಕರ್ಣದ ಮುತ್ತಿನೋಲೆ
ನಸುನಗುವ ಸುಲಿಪಲ್ಲ ಗುಣಶೀಲೆ ದೇವಿ
ಬಿಸಜಾಕ್ಷಿ ಎನ್ನ ಹೃದಯದೊಳು ನಿಂದು             ||||

ಇಂಪು ಸೊಂಪಿನ ಚಂದ್ರಬಿಂಬೆ
ಕೆಂಪು ತುಟಿಗಳ ನಾಸಿಕದ ರಂಭೆ
ಜೋಂಪು ಮದನನ ಪೂರ್ಣಶಕ್ತಿ ಗೊಂಬೆ ಒಳ್ಳೆ
ಸಂಪಿಗೆಯ ಮುಡಿಗಿಟ್ಟು ರಾಜಿಪ ಶಾರದಾಂಬೆ     ||||

ರವಿಕೋಟಿ ತೇಜಪ್ರಕಾಶೇ ಮಹಾ
ಕವಿಜನರ ಹ್ರಿತ್ಕಮಲ ವಾಸೇ
ಅವಿರಳಪುರಿಯ ಸಿರಿಕಾಗಿನೆಲೆಯಾದಿ 
ಕೇಶವನ ಸುತನಿಗೆ ಸನ್ನುತ ರಾಣಿವಾಸೆ                 ||||

 ........................................................................................................................

ಕನಕದಾಸರ ರಚನೆಗಳು   ಭಕ್ತಿಗೀತೆಗಳ ಸಾಹಿತ್ಯ   ಸರಸ್ವತಿ ದೇವಿಯ ಹಾಡುಗಳು

ದೇವಿ ನಮ್ಮ ದ್ಯಾವರು ಬಂದರು |DEVI NAMMA DYAVARU BANDARU SONG LYRICS |KANAKADASA SONGS|

 ಹಾಡಲು ಕಲಿಯಿರಿ(CLICK HERE TO LEARN THIS SONG)

ಕನಕದಾಸರಿಂದ ರಚಿತವಾದ ದಶಾವತಾರದ ಪದ

ದೇವಿ ನಮ್ಮ ದ್ಯಾವರು ಬಂದರು ಬನ್ನೀರೆ, ನೋಡ ಬನ್ನಿರೆ ||||

 

ಕೆಂಗಣ್ಣ ಮೀನನಾಗಿ ನಮ ರಂಗ ಗುಂಗಾಡು ಸೋಮನ ಕೊಂದಾನ್ಮ್ಯಾ|

ಗುಂಗಾಡು ಸೋಮನ ಕೊಂದು ವೇದವ ಬಂಗಾರದೊಡಲನಿಗಿತ್ತಾನ್ಮ್ಯಾ||1||

 

ದೊಡ್ಡ ಮಡುವಿನೊಳಗೆ ನಿಂತು ನಮ ರಂಗ ಗುಡ್ಡವ ಹೊತ್ಕೊಂಡು ನಿಂತಾನ್ಮ್ಯಾ|

ಗುಡ್ಡವ ಹೊತ್ಕೊಂಡು ನಿಂತು ಸುರರನು ದೊಡ್ಡವರನ್ನ ಮಾಡ್ಯಾನ್ಮ್ಯಾ ||2||

 

ಚೆನ್ನ ಕಾಡಿನ ಹಂದಿಯಾಗಿ ನಮ ರಂಗ ಚಿನ್ನದ ಕಣ್ಣನ ಕೊಂದಾನ್ಮ್ಯಾ

ಚಿನ್ನದ ಕಣ್ಣನ ಕೊಂದು ಭೂಮಿಯ ವನ್ನಜ ಸಂಭವಗಿತ್ತಾನ್ಮ್ಯಾ ||3||

 

ಸಿಟ್ಟಿಲಿಂದ ಸಿಂಹನಾಗಿ ನಮ ರಂಗ ಹೊಟ್ಟೆಯ ಕರುಳ ಬಗೆದಾನ್ಮ್ಯಾ |

ಹೊಟ್ಟೆಯ ಕರುಳ ಹಾರವ ಮಾಡಿ ಪುಟ್ಟಗೆ ವರವ ಕೊಟ್ಟಾನ್ಮ್ಯಾ||4||

 

ಹುಡುಗ ಹಾರುವನಾಗಿ ನಮ ರಂಗ ಬೆಡಗಲಿ ಮುಗಿಲಿಗೆ ಬೆಳೆದಾನ್ಮ್ಯಾ|

ಬೆಡಗಲಿ ಮುಗಿಲಿಗೆ ಬೆಳೆದು ಬಲಿಯನ್ನ ಅಡಿಯಿಂದ ಪಾತಾಳಕೊತ್ತ್ಯಾನ್ಮ್ಯಾ|| 5||

 

ತಾಯ ಮಾತನು ಕೇಳಿ ಸಾಸಿರ ತೋಳಿನ ಆವಿನ ಕಳ್ಳನ ಕೊಂದಾನ್ಮ್ಯಾ|

ಆವಿನ ಕಳ್ಳನ ಕೊಂದು ಭೂಮಿಯ ಅವನಿಸುರರಿಗೆ ಇತ್ತಾನ್ಮ್ಯಾ|| 6||

 

ಪಿಂಗಳ ಕಣ್ಣಿನ ಕೊಂಗಗಳ ಕೂಡಿ ಛಂಗನೆ ಲಂಕೆಗೆ ಪೋದಾನ್ಮ್ಯಾ|

ಛಂಗನೆ ಲಂಕೆಗೆ ಪೋಗಿ ನಮ ರಂಗ ಹೆಂಗಸುಗಳ್ಳನ ಕೊಂದಾನ್ಮ್ಯಾ||7||

 

ಕರಿಯ ಹೊಳೆಯ ಬಳಿ ತುರುಗಳ ಕಾಯುತ ಉರಗನ ಮಡುವ ಧುಮುಕ್ಯಾನ್ಮ್ಯಾ|

ಉರಗನ ಹೆಡೆ ಮೇಲೆ ಹಾರ್ಹಾರಿ ಕುಣಿವಾಗ ನಾರೇರ್ಗೆ ವರವ ಕೊಟ್ಟಾನ್ಮ್ಯಾ ||8||


ಭಂಡನಂದದಿ ಕುಂಡೆಯ ಬಿಟುಗೊಂಡು ಕಂಡ ಕಂಡಲ್ಲಿಗೆ ತಿರುಗ್ಯಾನ್ಮ್ಯಾ|

ಕಂಡ ಕಂಡಲ್ಲಿಗೆ ತಿರುಗಿ ತ್ರಿಪುರರ ಹೆಂಡಿರನೆಲ್ಲ ಕೆಡಿಸ್ಯಾನ್ಮ್ಯಾ ||9||


ಚೆಲುವ ಹೆಂಡತಿಯ ಕುದುರೆಯ ಮಾಡಿ ಒಳ್ಳೆಯ ರಾಹುತನಾದಾನ್ಮ್ಯಾ|

 ಒಳ್ಳೆಯ ರಾಹುತನಾಗಿ ಮ್ಲೇಚ್ಛರಡೊಳ್ಳು ಹೊಟ್ಟೆಯ ಮ್ಯಾಲೆ ಒದ್ದಾನ್ಮ್ಯಾ ||10||

 

ಡೊಳ್ಳಿನ ಮ್ಯಾಲ್ ಕೈಯ ಭರಮಪ್ಪ ಹಾಕ್ಯಾನ ತಾಳವ ಶಿವನಪ್ಪ ತಟ್ಟಾನ್ಮ್ಯಾ|

ಒಳ್ಳೊಳ್ಳೆ ಪದಗಳ ಹನುಮಪ್ಪಾ ಹಾಡ್ಯನ ಚೆಲುವ ಕನಕಪ್ಪ ಕುಣಿದಾನ್ಯ ||11||

.............................................................................................................................................................

ಕಂಡೆ ನಾ ತಂಡ ತಂಡದ ಹಿಂಡು ದೈವ |ನರಸಿಂಹ SONG |KANDE NAA TANDA TANDA | KANAKA DASA |KANNADA SAVIGANA LYRICS|


ಹಾಡಲು ಕಲಿಯಿರಿ(CLICK HERE TO LEARN THIS SONG)

 ಜಯ ಜಯ ನಾರಸಿಂಹ

ಜಯ ಜಯ ನಾರಸಿಂಹ

ಕಂಡೆ ನಾ ತಂಡ ತಂಡದ  ಹಿಂಡು ದೈವ

ಪ್ರಚಂಡ ರಿಪುಗಂಡ ಉದ್ದಂಡ ನರಸಿಂಹನ  ।। ಪ ।।

 

ಘುಡುಘುಡಿಸಿ ಕಂಬದಲಿ ಧಡಧಡ ಸಿಡಿಲು ಸಿಡಿಯೆ

ಕಿಡಿಕಿಡಿಸೆ ನುಡಿಯಡಗಲೊಡನೆ ಮುಡಿವಿಡಿದು

ಘಡ ಘಡನೆ ನಡು ನಡುಗೆ ಘುಡುಘುಡಿಸಿ ಸಭೆ ಬೆದರೆ

ಹಿಡಿ ಹಿಡಿದು ಹಿರಣ್ಯಕನ ತೊಡೆ ಮೇಲೆ ಕೆಡಹಿದನ ।। 1 ।।

 

ಉರದೊಳಪ್ಪಳಿಸಿ ಅರಿ ಬಸಿರ ಸರಸರ ಸೀಳಿ

ಪರಿಪರಿಯಲಿ ಚರ್ಮ ಎಳೆದೆಳೆದು ಎಲುಬು ನರ

ನರವನ್ನು ತೆಗೆದು ನಿರ್ಗಳಿತ ಶೋಣಿತ ಸುರಿಯೆ

ಹರಿಹರಿದು ಕರುಳ ಕೊರಳೊಗೆಯಿಟ್ಟವನ || 2 ||

 

ಪುರಜನರು ಹಾಯೆನಲು ಸುರರು ಹೂಮಳೆಗರೆಯೆ

ತರತರದ ವಾದ್ಯ ಸಂಭ್ರಮಗಳಿಂದ

ಹರಿಹರಿಯೆ ಶರಣೆಂದು ಸ್ತುತಿಸಿ ಶಿಶು ಮೊರೆಯಿಡುವ

ಕರುಣಾಳು ಕಾಗಿನೆಲೆಯಾದಿಕೇಶವನ ||3||

.......................................................................................


ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ | kanaka dasa| song lyrics in kannada| NAMMAMMA SHARADE

 


ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ
ನಿಮ್ಮೊಳಗಿಹನಾರಮ್ಮಾ|

ಕಮ್ಮಗೋಲನ ವೈರಿ ಸುತನಾದ ಸೊಂಡಿಲ
ಹೆಮ್ಮೆಯ ಗಣನಾಥನೇ ಕಾಣಮ್ಮಾ||

ಮೋರೆ ಕಪ್ಪಿನ ಭಾವ ಮೊರದಗಲದ ಕಿವಿ ಕೋರೆದಾಡೆಯನಾರಮ್ಮಾ|
ಮೂರುಕಣ್ಣನ ಸುತ ಮುರಿದಿಟ್ಟ ಚಂದ್ರನ ಧೀರ ತಾ ಗಣನಾಥನೇ ||1||

ಉಟ್ಟದಟ್ಟಿಯು ಬಿಗಿದುಟ್ಟ ಚೆಲ್ಲಣದ ದಿಟ್ಟ ತಾ ನಿವನಾರಮ್ಮ
ಪಟ್ಟದ ರಾಣಿ ಪಾರ್ವತಿಯ ಕುಮಾರನು ಹೊಟ್ಟೆಯ ಗಣನಾಥನೇ ||2||

ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲ ಭಾಷಿಗನಿವನಾರಮ್ಮ|
ಲೇಸಾಗಿ ಜನರ ಸಲಹುವ ಕಾಗಿನೆಲೆ ಆದಿ ಕೇಶವ ದಾಸ ಕಣೇ ||3||
............................................................................................


ಒಂಬತ್ತು ಹೂವಿಗೆ ಒಂದೇ ನಾಳವು song lyrics by kanaka dasa| ombhattu hoovige onde naalavu

 

ಹಾಡಲು ಕಲಿಯಿರಿ(CLICK HERE TO LEARN THIS SONG)

ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ

ತುಂಬಿ ನಾಳತುದಿ ತುಂಬಿ ಭಾನು ಪ್ರಭೆ ಚಂದಮಾಮ||

ಕದರು ಗಾತ್ರ ಕಂಬ ತೆಕ್ಕೆಗಾತರ ಹೂವು ಚಂದಮಾಮ
ಆನೆಗಾತರ ಕಾಯಿ ಒಂಟೆಗಾತರ ಹಣ್ಣು ಚಂದಮಾಮ ||1||

ಕಾಲಿಲ್ಲದಾತನು ಹತ್ತಿದನು ಮರವನು ಚಂದಮಾಮ
ಕೈಯಿಲ್ಲದಾತನು ಕೊಯ್ದನಾ ಹಣ್ಣನು ಚಂದಮಾಮ ||2||

ನೆತ್ತಿಲ್ಲದಾತನು ಹೊತ್ತನು ಹಣ್ಣ ಚಂದಮಾಮ
ತಳವಿಲ್ಲದಾ ಗೂಡೆಯಲಿಳಿಸಿದನಾ ಹಣ್ಣ ಚಂದಮಾಮ ||3||

ಮಾರ್ಗ ತಪ್ಪಿ ಮಾರ್ಗ ಹಿಡಿದು ನಡೆದರು ಚಂದಮಾಮ|
ಸದ್ದಿಲ್ಲದಾ ಸಂತೇಲಿಳಿಸಿದರಾ ಹಣ್ಣ ಚಂದಮಾಮ ||4||

ರೊಕ್ಕವಿಲ್ಲದಾತ ಕೊಂಡನಾ ಹಣ್ಣ ಚಂದಮಾಮ
ಮೂಗಿಲ್ಲದಾತ ಮೂಸಿದನಾ ಹಣ್ಣ ಚಂದಮಾಮ ||5||

ಕಣ್ಣಿಲ್ಲದಾತನು ಕೆಂಪಾನೆ ಹಣ್ಣೆಂದ ಚಂದಮಾಮ
ಅಂಗುಳಿಲ್ಲದಾತ ನುಂಗಿದನಾ ಹಣ್ಣ ಚಂದಮಾಮ \|6||

ಬಾಯಿಲ್ಲದಾತ ತಿಂದು ಬಸಿರಲಿಂಬಿಟ್ಟ ಚಂದಮಾಮ
ಸುಲಭ ಪದವಿದು ನಳಿನಜಾಂಡದೊಳು ಚಂದಮಾಮ ||7||

ಗುರುವಿನ ಮಹಿಮೆ ಗುರುವೆ ತಾ ಬಲ್ಲನು ಚಂದಮಾಮ
ಮೂಢನಾದವನೇನು ಬಲ್ಲನು ಮಾತು ಚಂದಮಾಮ ||8||

ಕನಕನಾಡಿದ ಗುಟ್ಟು ಆದಿಕೇಶವ ಬಲ್ಲ ಚಂದಮಾಮ
ತಿಳಿದವರು ಪೇಳಿರೀ ಹಳೆಗನ್ನಡವ ಚಂದಮಾಮ ||9||


ಏಸು ಕಾಯಂಗಳ ಕಳೆದು | ESU KAYANGALA KALEDU| KANAKA DASA SONG LYRICS IN KANNADA|

 


ಏಸು ಕಾಯಂಗಳ ಕಳೆದು ಎಂಬತ್ನಾಲ್ಕು ಲಕ್ಷ ಜೀವರಾಶಿಯನ್ನು

 ದಾಟಿ ಬಂದ ಶರೀರ |
ತಾನಲ್ಲ ತನ್ನದಲ್ಲ ಆಸೆ ತರವಲ್ಲ ಮುಂದೆ ಬಾಹೋದಲ್ಲ
ದಾಸನಾಗು ವಿಶೇಷನಾಗು ದಾಸನಾಗು ಭವಪಾಶ ನೀಗು || ||

 

ಆಶ ಕ್ಲೇಶ ದೋಷವೆಂಬ ಅಬ್ಧಿಯೊಳು ಮುಳುಗಿ
ಯಮನ ಪಾಶಕ್ಕೊಳಗಾಗದೆ ನಿರ್ದೋಷಿಯಾಗು ಸಂತೋಷಿಯಾಗು |

ಕಾಶಿ ವಾರಣಾಸಿ ಕಂಚಿ ಕಾಳಹಸ್ತಿ ರಾಮೇಶ್ವರ
ಏಸು ದೇಶ ತಿರುಗಿದರೆ ಬಾಹೋದೇನೋ ಅಲ್ಲಿ ಹೋದೇನೋ |
ದೋಷ ನಾಶಿ ಕೃಷ್ಣೆ ಗಂಗೆ ಗೋದಾವರಿ ಭವನಾಶಿ |
ತುಂಗಭದ್ರೆ ಯಮುನೆ ವಾಸದಲ್ಲಿ ಉಪವಾಸದಲ್ಲಿ |
ಮೀಸಲಾಗಿ ಮಿಂದು ಜಪ ತಪ ಹೋಮ ನೇಮಗಳ |
ಏಸು ಬಾರಿ ಮಾಡಿದರು ಫಲವೇನು ಛಲವೇನು

ದಾಸನಾಗು ವಿಶೇಷನಾಗು ದಾಸನಾಗು ವಿಶೇಷನಾಗು  || 1 ||

ಅಂದಿಗೋ ಇಂದಿಗೋ ಒಮ್ಮೆ ಸಿರಿಕಮಲೇಶನನ್ನು
ಒಂದು ಬಾರಿ ಯಾರೂ ಹಿಂದ ನೆನೆಯಲಿಲ್ಲ ಮನದಣಿಯಲಿಲ್ಲ |
ಬಂದು ಬಂದು ಭ್ರಮೆಗೊಂಡು ಮಾಯಾಮೋಹಕ್ಕೆ ಸಿಕ್ಕಿ
ನೊಂದು ಬೆಂದು ಒಂದರಿಂದ ಉಳಿಯಲಿಲ್ಲ ಬಂಧ ಕಳೆಯಲಿಲ್ಲ |
ಸಂದೇಹವ ಮಾಡದಿರು ಅರಿವು ಎಂಬ ದೀಪವಿಟ್ಟು
ಇಂದು ಕಂಡ್ಯ ದೇಹದಲ್ಲಿ ಪಿಂಡಾಂಡ ಹಾಗೆ ಬ್ರಹ್ಮಾಂಡ |
ಇಂದು ಹರಿಯ ಧ್ಯಾನವನ್ನು ಮಾಡಿ ವಿವೇಕದಿ
ಮುಕುಂದನಿಂದ ಮುಕ್ತಿ ಬೇಡು ಕಂಡ್ಯ ನೀ ನೋಡು ಕಂಡ್ಯ
ದಾಸನಾಗು ವಿಶೇಷನಾಗು ದಾಸನಾಗು ವಿಶೇಷನಾಗು  || 2 ||

 

ನೂರು ಬಾರಿ ಶರಣು ಮಾಡಿ ನೀರ ಮುಳುಗಲ್ಯಾಕೆ
ಪರ ನಾರಿಯರ ನೋಟಕೆ ಗುರಿಯ ಮಾಡಿದಿ ಮನ ಸೆರೆಯ ಮಾಡಿದಿ |
ಸೂರೆಯೊಳು ಸೂರೆ ತುಂಬಿ ಮೇಲೆ ಹೂವಿನ ಹಾರ
ಗೀರು ಗಂಧ ಅಕ್ಷತೆಯ ಧರಿಸಿದಂತೆ ನೀ ಮೆರೆಸಿದಂತೆ |
ಗಾರುಢಿಯ ಮಾತ ಬಿಟ್ಟು ನಾದಬ್ರಹ್ಮನ ಪಿಡಿದು
ಸಾರಿ ಸೂರಿ ಮುಕ್ತಿಯನ್ನು ಶಮನದಿಂದ ಮತ್ತೆ ಸುಮನದಿಂದ |
ನಾರಾಯಣ ಅಚ್ಯುತ ಅನಂತಾದಿ ಕೇಶವನ
ಸಾರಾಮೃತವನ್ನುಂಡು ಸುಖಿಸೋ ಲಂಡ ಜೀವವೇ ಎಲೇ ಭಂಡ ಜೀವವೇ

ದಾಸನಾಗು ವಿಶೇಷನಾಗು ದಾಸನಾಗು ವಿಶೇಷನಾಗು  || 3 ||

………………………………………………………………………………………….

 


ವಿಘ್ನೇಶ್ವರ ನಿನಗೆ ಪ್ರಥಮ ಪ್ರಣಾಮ SONG LYRICS IN KANNADA |VIGHNESHWARA NINAGE PRATHAMA PRANAMA | LORD GANESHA SONGS

  ಹಾಡಲು ಕಲಿಯಿರಿ(CLICK HERE TO LEARN THIS SONG) ವಿಘ್ನೇಶ್ವರ ನಿನಗೆ ಪ್ರಥಮ ಪ್ರಣಾಮ ಸ್ಮರಿಸುವೆ ನಿನ್ನಯ ದಿವ್ಯ ನಾಮ ॥   ವಿಘ್ನ ವಿನಾಶಕ ಬುದ್ಧಿಪ್ರ...